ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಸಿಎಂ ಅರವಿಂದ್ ಕೇಜ್ರಿವಾಲ್

Krishnaveni K

ಶುಕ್ರವಾರ, 22 ಮಾರ್ಚ್ 2024 (14:19 IST)
Photo Courtesy: Twitter
ನವದೆಹಲಿ: ಅಬಕಾರಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದಿದ್ದಾರೆ.

ಅರವಿಂದ್ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ಈ ವಿಚಾರ ತಿಳಿಸಿದ್ದಾರೆ. ಔಪಚಾರಿಕತೆಗನುಗುಣವಾಗಿ ಈಗ ಅವರು ಕೆಳ ಹಂತದ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಿದ್ದಾರೆ ಎಂದು ಅಭಿಷೇಕ್ ಮನು ಸಿಂಘ್ವಿ ಸುಪ್ರೀಂಕೋರ್ಟ್ ಗೆ ತಿಳಿಸಿದ್ದಾರೆ.

ಈಗಾಗಲೇ ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ವಿಪಕ್ಷಗಳು ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಆದರೆ ಕಳೆದ 9 ಬಾರಿ ಸಮನ್ಸ್ ನೀಡಿಯೂ ವಿಚಾರಣೆಗೆ ಹಾಜರಾಗಿರಲಿಲ್ಲ. ಅಲ್ಲದೆ ದೆಹಲಿ ಜಲ ಮಂಡಳಿ ಅಕ್ರಮಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೂ ಉತ್ತರಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಅವರನ್ನು ಇಡಿ ಇಲಾಖೆ ಬಂಧಿಸಿದೆ. ಆದರೆ ಇದೆಲ್ಲಾ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮೋದಿ ಸರ್ಕಾರದ ಪಿತೂರಿ ಎನ್ನುವುದು ವಿಪಕ್ಷಗಳ ಆರೋಪವಾಗಿದೆ.

ಇದೀಗ ಕೇಜ್ರಿವಾಲ್ ಕುಟುಂದವರೂ ಗೃಹಬಂಧನದಲ್ಲಿದ್ದಾರೆ ಎನ್ನಲಾಗಿದೆ. ಎಎಪಿ ನಾಯಕನ ಪರವಾಗಿ ಪ್ರತಿಭಟನೆ ನಡೆಸಿದ ಇತರೆ ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ