ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಇಂದು ಬಿಡುಗಡೆಯ ನಿರೀಕ್ಷೆ

Krishnaveni K

ಮಂಗಳವಾರ, 25 ಜೂನ್ 2024 (09:29 IST)
ನವದೆಹಲಿ: ಅಬಕಾರಿ ಅಕ್ರಮ ಹಗರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.

ಗುರುವಾರ ದೆಹಲಿಯ ಸ್ಥಳೀಯ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಿತ್ತು. ಬಿಡುಗಡೆಯ ನಿರೀಕ್ಷೆಯಲ್ಲಿದ್ದ ಕೇಜ್ರಿವಾಲ್ ಗೆ ಹೈಕೋರ್ಟ್ ತಡೆ ನೀಡಿತ್ತು. ಕೇಜ್ರಿವಾಲ್ ರಿಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ಇಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಅದರಂತೆ ಹೈಕೋರ್ಟ್ ಜಾಮೀನಿಗೆ ತಡೆ ನೀಡಿ ವಿಚಾರಣೆ ಮುಂದೂಡಿತ್ತು.

ಇಂದು ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿ ಜಾಮೀನು ನೀಡಬೇಕೋ ಬೇಡವೋ ಎಂಬ ಬಗ್ಗೆ ತೀರ್ಪು ಪ್ರಕಟಿಸಲಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೇಜ್ರಿವಾಲ್ ಮಧ್ಯಂತರ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು. ಬಳಿಕ ಕೋರ್ಟ್ ಸೂಚನೆಯಂತೆ ಜೂನ್ 2 ರಂದು ಶರಣಾಗಿದ್ದರು.

ದೆಹಲಿ ಅಬಕಾರಿ ಅಕ್ರಮ ಪ್ರಕರಣದಲ್ಲಿ 100 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂಬ ಆರೋಪದಲ್ಲಿ ಸಿಎಂ ಕೇಜ್ರಿವಾಲ್ ರನ್ನು ಕಳೆದ ಮಾರ್ಚ್ ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ