ದೇಶದ ಅತಿ ದೊಡ್ಡ ಐಕಿಯಾ ಮಳಿಗೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು, ಜೂನ್ 22: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ.ಶೇ.75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ 'ಐಕಿಯಾ' ದ ಅತಿದೊಡ್ಡ ಮಳಿಗೆಯನ್ನು ನಗರದ ನಾಗಸಂದ್ರದಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ದಾವೋಸ್ ನಲ್ಲಿ ಅಂತಾರಾಷ್ಟ್ರೀಯ ಐಕಿಯಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿತ್ತು. ಸುಮಾರು 3000 ಕೋಟಿ ಹೂಡಿಕೆ ಮಾಡಲು ತೀರ್ಮಾನ ಮಾಡಿದ್ದಾರೆ ಎಂದರು.