ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಸಿಎಂ

ಬುಧವಾರ, 24 ಆಗಸ್ಟ್ 2016 (08:07 IST)
ಯಾವುದೇ ಕಾರಣಕ್ಕೂ ಈ ಬಾರಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನ್ನಾಡುತ್ತಿದ್ದ ಅವರು, ಕಾವೇರಿ ಜಲಾನಯದ ಪ್ರದೇಶದಲ್ಲಿ ಉತ್ತಮ ಮಳೆಯಾಗದೇ ಇರುವುದರಿಂದ ನಮಗೆ ನೀರಿನ ಸಂಕಷ್ಟ ಆರಂಭವಾಗಿದೆ. ಕುಡಿಯುವ ನೀರಿಗೆ ತತ್ವಾರವಾಗಿರುವಾಗ ಕೃಷಿಗೆ ಹೇಗೆ ನೀರು ಕೊಡಲು ಸಾಧ್ಯ. ಹೀಗಾಗಿ ನೆರೆ ರಾಜ್ಯಕ್ಕೆ ನೀರು ಬಿಡಲಾಗುವುದಿಲ್ಲವೆಂದು ಸುಪ್ರೀಂಕೋರ್ಟ್‌ಗೆ ಮನವರಿಗೆ ಮಾಡಿಸಲಾಗುವುದು ಎಂದುಹೇಳಿದ್ದಾರೆ.
 
ಕಾವೇರಿ ಜಲಾನಯ ಪ್ರದೇಶದಲ್ಲಿ ಉತ್ತಮ ಮಳೆಯಾದಾಗ ತಮಿಳುನಾಡಿಗೆ ನೀರು ಬಿಡಲಾಗಿದೆ. ಆದರೆ ಈ ಬಾರಿ ಮುಂಗಾರಿನ ಕೊರತೆಯಿಂದಾಗಿ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ನಮ್ಮ ಪರಿಸ್ಥಿತಿ ಹೀಗಿರುವಾಗ ತಮಿಳುನಾಡು ಸರ್ಕಾರ ನೀರು ಕೇಳುತ್ತಿರುವುದು ಸರಿಯಲ್ಲ ಎಂದಿದ್ದಾರೆ ಸಿಎಂ.
 
ನಮಗೆ 50ಟಿಎಂಸಿ ನೀರು  ಬಿಡುವಂತೆ ಸೂಚಿಸಿ ಎಂದು ಕೋರಿ ತಮಿಳುನಾಡು ಸರ್ಕಾರ ಸೋಮವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ವೆಬ್ದುನಿಯಾವನ್ನು ಓದಿ