ಚಂದ್ರಬಾಬು ನಾಯ್ಡು, ವೆಂಕಯ್ಯ ನಾಯ್ಡು, ಪವನ್ ಕಲ್ಯಾಣಗೆ ತಿರುಗೇಟು ಕೊಟ್ಟ ಜಗನ್

ಮಂಗಳವಾರ, 12 ನವೆಂಬರ್ 2019 (07:05 IST)
ವಿಜಯವಾಡ : ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂ ಸ್ಕೂಲ್ ಗಳನ್ನಾಗಿ ಪರಿವರ್ತಿಸುವ ಬಗ್ಗೆ ವಿರೋಧ ವ್ಯಕ್ತಪಡಿಸಿದ ರಾಜಕೀಯ ನಾಯಕರಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ತಿರುಗೇಟು ನೀಡಿದ್ದಾರೆ.




ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂ ಸ್ಕೂಲ್ ಗಳನ್ನಾಗಿ ಪರಿವರ್ತಿಸುವ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪವನ್ ಕಲ್ಯಾಣ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ, ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪವನ್ ಕಲ್ಯಾಣ ಅವರ ಮಕ್ಕಳು ಯಾವ ಮಾಧ್ಯಮದಲ್ಲಿ ಅಧ್ಯಯನ ಮಾಡಿದ್ದಾರೆ? ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಅಲ್ಲದೇ ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂ ಸ್ಕೂಲ್ ಗಳನ್ನಾಗಿ ಪರಿವರ್ತಿಸುವ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವ ಎಲ್ಲಾ ನಾಯಕರು ತಮ್ಮ ಮಕ್ಕಳು ಯಾವ ಮಾಧ್ಯಮದಲ್ಲಿ ಓದುತ್ತಿದ್ದಾರೆ ಎಂದು ಎದೆ ಮೇಲೆ ಕೈ ಇಟ್ಟುಕೊಂಡು ಹೇಳಲಿ ಎಂದು ಸವಾಲು ಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ