ಸಿಸೋಡಿಯಾ ನೆನೆದು ಕಣ್ಣೀರಾಕಿದ ಸಿಎಂ ಕೇಜ್ರಿವಾಲ್

ಬುಧವಾರ, 7 ಜೂನ್ 2023 (13:36 IST)
ನವದೆಹಲಿ : ಜೈಲುವಾಸ ಅನುಭವಿಸುತ್ತಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೆನಪಿಸಿಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಗರದಲ್ಲಿ ಬುಧವಾರ ಹೊಸ ಶಾಲೆಯನ್ನು ಉದ್ಘಾಟನೆ ಮಾಡಿ ಮಾತನಾಡುತ್ತಾ ಗೆಳೆಯ ಸಿಸೋಡಿಯಾ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳುತ್ತಾ ಅತ್ತು ಬಿಟ್ಟರು. 
 
ಇದೇ ವೇಳೆ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ಇವರು ಶಿಕ್ಷಣದಲ್ಲಿ ದೆಹಲಿಯ ಕ್ರಾಂತಿಯನ್ನು ಪೂರ್ಣಗೊಳಿಸಲು ಬಯಸುತ್ತಾರೆ. ಆದರೆ ಹಾಗೆ ಆಗಲು ನಾವು ಬಿಡಲ್ಲ ಎಂದು ಕಿಡಿಕಾರಿದರು. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ  ಸಿಸೋಡಿಯಾ ಅವರು ಕಳೆದ ಫೆಬ್ರವರಿಯಿಂದ ಜೈಲಿನಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ