ಮಹಿಳೆಯರ ರಕ್ಷಣೆಗಾಗಿ ಸಿಎಂ ಕ್ರೇಜಿವಾಲ್ ಸರ್ಕಾರದಿಂದ ಹೊಸ ಯೋಜನೆ ಜಾರಿ
ಮಂಗಳವಾರ, 29 ಅಕ್ಟೋಬರ್ 2019 (07:02 IST)
ನವದೆಹಲಿ : ದೇಶದ ರಾಜದಾನಿ ದೆಹಲಿಯಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಸಿಎಂ ಕ್ರೇಜಿವಾಲ್ ಸರ್ಕಾರ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.
ಪ್ರತಿನಿತ್ಯ ಸಾರ್ವಜನಿಕರು ಓಡಾಡುವ ಸಾರಿಗೆ ಬಸ್ ಗಳಲ್ಲಿ ಓಡಾಡುವ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅವರ ರಕ್ಷಣೆಗಾಗಿ ಬಸ್ ಗಳಲ್ಲಿ 13 ಸಾವಿರ ಮಂದಿ ಮಾರ್ಷಲ್ ಗಳನ್ನು ನೇಮಕ ಮಾಡಿಕೊಳ್ಳುವ ನಿರ್ಧಾರ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಜ್ರಿವಾಲ್ ಅವರು, ಮಹಿಳೆಯರಿಗೆ ರಕ್ಷಣೆ ನೀಡುವುದೇ ನಮ್ಮ ಮೊದಲ ಆದ್ಯತೆ. ಇದುವರೆಗೂ ವಿಶ್ವದ ಯಾವುದೇ ನಗರದಲ್ಲಿ ನೀಡಿರದ ಮಾದರಿಯಲ್ಲಿ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.