ಮೋದಿ, ಅಮಿತ್ ಶಾ ಗೆ ಸವಾಲು ಎಸೆದ ಸಿಎಂ ಮಮತಾ ಬ್ಯಾನರ್ಜಿ

ಗುರುವಾರ, 21 ಮಾರ್ಚ್ 2019 (06:54 IST)
ಕೋಲ್ಕತ್ತಾ : ದುರ್ಗಾ ಮೂರ್ತಿಗಳ ವಿಸರ್ಜನೆ ಹಾಗೂ ಶಾಲೆಗಳಲ್ಲಿ ಸರಸ್ವತಿ ಪೂಜೆಗೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಬಿಜೆಪಿ ಆರೋಪಕ್ಕೆ  ಪ್ರತಿಕ್ರಿಯಿಸಿದ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ನಾಯಕರಿಗೆ ಸವಾಲೊಂದನ್ನು  ಹಾಕಿದ್ದಾರೆ.

ಅಂತಾರಾಷ್ಟ್ರೀಯ ಮಾರ್ವಾಡಿ ಫೆಡರೇಶನ್ ಆಯೋಜಿಸಿದ್ದ ಹೋಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಮತಾ ಬ್ಯಾನರ್ಜಿ, ಬರೀ ಹಣೆಯ ಮೇಲೆ ತಿಲಕ ಇಡುವುದೇ ಧಾರ್ಮಿಕ ಶೃದ್ಧೆಯ ಸಂಕೇತವಲ್ಲ. ನನ್ನ ಜೊತೆ ಸಂಸ್ಕೃತ ಶ್ಲೋಕಗಳ ಪಠಣದ ಸ್ಪರ್ಧೆಗೆ ಬನ್ನಿ ಎಂದು ನಾನು ಅಮಿತ್‍ ಬಾಬು ಮತ್ತು ನರೇಂದ್ರಬಾಬು ಅವರಿಗೆ ಆಹ್ವಾನ ನೀಡುತ್ತಿದ್ದೇನೆ. ಸಂಸ್ಕೃತ ಶ್ಲೋಕಗಳ ಬಗ್ಗೆ ಯಾರಿಗೆ ಆಳವಾದ ಜ್ಞಾನವಿದೆ ಅಂತ ನೋಡೇ ಬಿಡೋಣ ಎಂದು ಸವಾಲು ಎಸೆದಿದ್ದಾರೆ.

 

ನಾವು ಹಲವಾರು ವರ್ಷಗಳಿಂದ ದುರ್ಗಾಪೂಜೆ ಮಾಡುತ್ತಿದ್ದೇವೆ. ನವರಾತ್ರಿ, ಛತ್ ಪೂಜಾ ಮತ್ತು ಗಣಪತಿ ವಂದನಾದಂತಹ ಧಾರ್ಮಿಕ ಆಚರಣೆಗಳನ್ನು ನಾವು ಎತ್ತಿ ಹಿಡಿದಿದ್ದೇವೆ. ಆದ್ರೆ ದಿಲ್ಲಿಯಲ್ಲಿ ಕುಳಿತ ಕೆಲವರು ನಮ್ಮತ್ತ ಕೈ ತೋರಿಸುತ್ತಿದ್ದಾರೆ. ರಾಜ್ಯದಲ್ಲಿ ಪೂಜೆ ಮಾಡುವುದು ಅಪರಾಧವೆನ್ನುವ ಪರಿಸ್ಥಿತಿ ಬಂದಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ