ಸರ್ಕಾರದ ಏಕಸ್ವಾಮ್ಯದಲ್ಲಿದ್ದ ಕಲ್ಲಿದ್ದಲು ವಲಯಗಳು ಖಾಸಗಿ ಸಂಸ್ಥೆಗೆ

ಶುಕ್ರವಾರ, 19 ಜೂನ್ 2020 (09:24 IST)
Normal 0 false false false EN-US X-NONE X-NONE

ನವದೆಹಲಿ : ಕೇಂದ್ರ ಸರ್ಕಾರ ಕಲ್ಲಿದ್ದಲು ವಲಯಗಳನ್ನು ಸರ್ಕಾರದ ಏಕಸ್ವಾಮ್ಯದಿಂದ ರದ್ದುಗೊಳಿಸಿ ಖಾಸಗಿ ಸಂಸ್ಥೆಗಳಿಗೆ ವಾಣಿಜ್ಯ ಗಣಿಗಾರಿಕೆಗಾಗಿ ನೀಡಿದೆ.

 

ಈ ವ್ಯವಸ್ಥೆಯನ್ನು ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಜೂನ್ 18ರಂದು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಪ್ರಧಾನಿ ಮೋದಿಯವರು, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳುತ್ತಿದೆ. ಕಲ್ಲಿದ್ದಲು ಉತ್ಪಾದನೆಯಲ್ಲಿ ನಾಲ್ಕನೇ ದೊಡ್ಡ ದೇಶವಾದರೂ ನಾವು ಹೆಚ್ಚಿನ ಪ್ರಮಾಣದಲ್ಲಿ ಕಲ್ಲಿದ್ದಲು ಆಮದು ಮಾಡಿಕೊಳ್ಳುತ್ತಿದ್ದೇವೆ. ಈಗ ಖಾಸಗಿ ಸಹಭಾಗಿತ್ವದಲ್ಲಿ ದೇಶದಲ್ಲಿ ಕಲ್ಲಿದ್ದಲು ಉತ್ಪಾದನೆ ಹೆಚ್ಚಾಗಲಿದೆ, ಜೊತೆಗೆ ಉದ್ಯೋಗಾವಕಾಶಗಳು ಹೆಚ್ಚಲಿದೆ ಎಂದು ಹೇಳಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ