ನವದೆಹಲಿ : ಅದಾನಿ ಸಮೂಹದ ವಿರುದ್ಧ ಅಮೆರಿಕದ ಹಿಂಡೆನ್ಬರ್ಗ್ ರಿಸರ್ಚ್ ಮಾಡಿದ ವಂಚನೆಯ ಆರೋಪಗಳನ್ನು ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಟೋನಿ ಅಬಾಟ್ ತಳ್ಳಿ ಹಾಕಿದ್ದು ನಿಯಂತ್ರಕರು ಈ ವಿಷಯವನ್ನು ಪರಿಶೀಲಿಸುತ್ತಾರೆ ಎಂದು ಹೇಳಿದ್ದಾರೆ.
ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಆರೋಪಗಳನ್ನು ಮಾಡುವುದು ಸುಲಭ. ಆರೋಪ ಸಾಬೀತಾಗುವವರೆಗೂ ನೀವು ನಿರಾಪರಾಧಿ. ಆಸ್ಟ್ರೇಲಿಯಾದಲ್ಲಿ ಅದಾನಿ ಸಮೂಹವು ತೋರಿಸಿದ ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ ಎಂದರು.
ಆಸ್ಟ್ರೇಲಿಯಾದಲ್ಲಿ ಶತಕೋಟಿ ಡಾಲರ್ ಅದಾನಿ ಹೂಡಿಕೆಯನ್ನು ಉಲ್ಲೇಖಿಸಿದ ಅವರು, ಈ ಹೂಡಿಕೆಯಿಂದ ಆಸ್ಟ್ರೇಲಿಯಾದಲ್ಲಿ ಉದ್ಯೋಗ ಸೃಷ್ಟಿಯಾಗಿದೆ. ಅದಾನಿ ಸಮೂಹ ಯಾವುದೇ ಸುಂಕವನ್ನು ಪಾವತಿಸಿದೇ ಕಲ್ಲಿದ್ದಲು ಆಮದು ಮಾಡಿದ್ದರಿಂದ ಭಾರತದಲ್ಲಿ ಲಕ್ಷಾಂತರ ಜನರಿಗೆ 2್ಠ47 ವಿದ್ಯುತ್ ಲಭ್ಯವಾಗುತ್ತಿದೆ ಎಂದು ತಿಳಿಸಿದರು.