20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್

ಸೋಮವಾರ, 10 ಏಪ್ರಿಲ್ 2023 (08:30 IST)
ನವದೆಹಲಿ : ಅಭ್ಯರ್ಥಿಗಳ ಆಯ್ಕೆಗೆ ತೀವ್ರ ಕಸರತ್ತು ನಡೆಸುತ್ತಿರುವ ಬಿಜೆಪಿ ಇಂದು ತನ್ನ ಮೊದಲ ಪಟ್ಟಿ ಪ್ರಕಟಿಸುತ್ತಿದೆ. ಇಂದು ಮಧ್ಯಾಹ್ನದ ವೇಳೆಗೆ 175 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಿದೆ. ಭಾನುವಾರ ಚುನಾವಣಾ ಸಮಿತಿ ಸಭೆ ನಡೆಸಿರುವ ವರಿಷ್ಠರು ಸಚಿವರು ಸೇರಿದಂತೆ 85ಕ್ಕೂ ಹೆಚ್ಚು ಹಾಲಿ ಶಾಸಕರ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
 
ಕರ್ನಾಟಕದಲ್ಲಿ ಗುಜರಾತ್, ಉತ್ತರ ಪ್ರದೇಶದ ಮಾದರಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಹಿಂದೇಟು ಹಾಕಿರುವ ಬಿಜೆಪಿ ಹೈಕಮಾಂಡ್ ಬಹುತೇಕ ಸಚಿವರು ಮತ್ತು ಹಾಲಿ ಶಾಸಕರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ಸುಮಾರು 20 ಶಾಸಕರಿಗೆ ಟಿಕೆಟ್ ತಪ್ಪಬಹುದು ಎನ್ನಲಾಗಿದ್ದು ಸರ್ವೆ ವರದಿಗಳಲ್ಲಿ ಖುಣಾತ್ಮಕ ವರದಿ ಬಂದಿರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಕೈ ಬಿಡಲಾಗುತ್ತಿದೆ.

ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಬಹುದು ಎಂದು ಚುನಾವಣಾ ಸಮೀಕ್ಷೆಗಳು ತಿಳಿಸಿದ ಬೆನ್ನಲ್ಲೇ ಹೈಕಮಾಂಡ್  ನಾಯಕರು ಸರಣಿ ಸಭೆ ನಡೆಸಿ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡುತ್ತಿದ್ದಾರೆ.  ಈ ಬಾರಿ ಎರಡು ಡಜನ್ಗೂ ಹೆಚ್ಚು ಶಾಸಕರನ್ನು ಕೈ ಬಿಡುವ ಸಾಧ್ಯತೆ ಇದ್ದು,  ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರ ಆರೋಪ, ಚಾರಿತ್ರ್ಯ ಕಾರಣದಿಂದ ಇಮೇಜ್ ಕಳೆದುಕೊಂಡ ನಾಯಕರಿಗೆ ಗೇಟ್ ಪಾಸ್ ನೀಡಲು ಸಭೆ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ