ಕೋಲ್ಡ್ ಸ್ಟೋರೇಜ್ನ ಮೇಲ್ಛಾವಣಿ ಕುಸಿತ : 8 ಮಂದಿ ದುರ್ಮರಣ

ಶುಕ್ರವಾರ, 17 ಮಾರ್ಚ್ 2023 (11:51 IST)
ಲಕ್ನೋ : ಆಲೂಗಡ್ಡೆ ಕೋಲ್ಡ್ ಸ್ಟೋರೇಜ್ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಸಂಭಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ.
 
ಆಲೂಗಡ್ಡೆ ಕೋಲ್ಡ್ ಸ್ಟೋರೇಜ್ನ ಮಾಲೀಕರನ್ನು ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಹಿಂದೆಯೇ ಕೋಲ್ಡ್ ಸ್ಟೋರೇಜ್ ಶಿಥಿಲಾವಸ್ಥೆಯಲ್ಲಿದೆ ಎಂದು ವರದಿಯಾಗಿತ್ತು. ಆದರೆ ಕಟ್ಟಡ ಕುಸಿತಕ್ಕೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಮೊರಾಬಾದ್ ಡಿಐಜಿ ಶಲಭ್ ಮಾಥುರ್ ಮಾತನಾಡಿ, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 11 ಮಂದಿಯನ್ನು ರಕ್ಷಿಸಲಾಗಿದೆ. ಕಟ್ಟಡದಲ್ಲಿ ನೆಲಮಾಳಿಗೆಯಿದ್ದು, ಅಲ್ಲಿಯೂ ಯಾರಾದರೂ ಸಿಲುಕಿಕೊಂಡಿದ್ದಾರಾ ಎಂದು ಹುಡುಕುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ