ಚಂಡೀಗಢ : ಕೋಮು ಸಂಘರ್ಷಕ್ಕೆ ಹರಿಯಾಣ ತತ್ತರಿಸಿದೆ. ನಿನ್ನೆಯಿಂದ ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಹೊತ್ತಿ ಉರಿಯುತ್ತಿವೆ. ಕರ್ಫ್ಯೂ ಲೆಕ್ಕಿಸದೇ ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡ್ತಿದ್ದಾರೆ.
ಮಂಗಳವಾರ 200 ಮಂದಿಯನ್ನೊಳಗೊಂಡ ಶಸ್ತ್ರಸಜ್ಜಿತ ಗುಂಪೊಂದು ಏಕಾಏಕಿ ದಾಳಿ ನಡೆಸಿದ್ದು, ಬಹಳಷ್ಟು ಹಾನಿಯುಂಟು ಮಾಡಿದೆ.
ಗುರುಗ್ರಾಮದಲ್ಲಿ ಮಂಗಳವಾರವೂ ಆಕ್ಷೇಪಾರ್ಹ ಘೋಷಣೆಗಳನ್ನ ಕೂಗುತ್ತಾ ರೆಸ್ಟೋರೆಂಟ್, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿಯಿಂದಲೂ ನಡೆಯುತ್ತಿರುವ ಘರ್ಷಣೆಯಲ್ಲಿ ಈವರೆಗೆ ಐವರು ಬಲಿಯಾಗಿದ್ದಾರೆ.
ಸೋಮವಾರ ಸಂಜೆ ಮೆವಾತ್ನಲ್ಲಿ ವಿಹೆಚ್ಪಿ- ಬಜರಂಗದಳದ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟದಿಂದಾಗಿ ನಡೆದ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್ಗಳು ಸಾವನ್ನಪ್ಪಿದ್ರು. ರಾತ್ರಿ ಮತ್ತೆ ನಡೆದ ಘರ್ಷಣೆಯಲ್ಲಿ ಇನ್ನಿಬ್ಬರು ಬಲಿಯಾಗಿದ್ದಾರೆ. 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ.