ಮತಾಂತರವಾಗುವಂತೆ ಒತ್ತಾಯ! 9 ಮಂದಿ ವಿರುದ್ಧ ಕೇಸ್

ಭಾನುವಾರ, 30 ಅಕ್ಟೋಬರ್ 2022 (15:24 IST)
ಲಕ್ನೋ : ಲಾಕ್ಡೌನ್ ಸಂದರ್ಭದಲ್ಲಿ ಮಾಡಿದ ಸಹಾಯಕ್ಕಾಗಿ ಉತ್ತರಪ್ರದೇಶ ಮೀರತ್ನಲ್ಲಿ ಕೆಲವರಿಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ.

ಆರೋಪದ ಮೇಲೆ ಮೂವರು ಮಹಿಳೆಯರು ಸೇರಿದಂತೆ 9 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಮೀರತ್ನ ಬ್ರಹ್ಮಪುರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಛಬಿಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕು, ಬಸಂತ್, ಪ್ರೇಮಾ, ತಿತ್ಲಿ ಮತ್ತು ರೀನಾ ಎಂದು ಗುರುತಿಸಲಾಗಿದೆ.

ಅವರ ವಿರುದ್ಧ ಮತಾಂತರ ನಿಷೇಧ ಕಾಯ್ದೆಯ ಸೆಕ್ಷನ್ 3, 5(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಉಳಿದ 6 ಮಂದಿಗಾಗಿ ಬಲೆ ಬೀಸಲಾಗಿದೆ ಎಂದು ಮೀರತ್ ಎಸ್ಪಿ ಪಿಯೂಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ