ಈ ಪ್ರದೇಶದಲ್ಲಿ ಹೆಚ್ಚಾಗ್ತಿದೆ ಕಾಂಡೋಮ್ ಮಾರಾಟ !?

ಮಂಗಳವಾರ, 2 ಆಗಸ್ಟ್ 2022 (09:13 IST)
ಕೋಲ್ಕತ್ತಾ : ಕಾಂಡೋಮ್ಗಳ ಮಾರಾಟ ಹೆಚ್ಚಾಗುತ್ತಿರುವ ಬಗ್ಗೆ ಆಗಾಗಾ ಸುದ್ದಿಯಾಗುತ್ತಲೇ ಇರುತ್ತದೆ.

ಆದರೆ ಪಶ್ಚಿಮ ಬಂಗಾಳದಲ್ಲಿ ದಿಢೀರನೇ ಕಾಂಡೋಮ್ ಮಾರಾಟ ಹೆಚ್ಚಳವಾಗಿರುವ ವಿಚಾರ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಹೌದು, ಪಶ್ಚಿಮ ಬಂಗಾಳದ ದುರ್ಗಾಪುರದ ವಿದ್ಯಾರ್ಥಿಗಳು ಹೆಚ್ಚಾಗಿ ಕಾಂಡೋಮ್ಗಳನ್ನು ಖರೀದಿಸುತ್ತಿದ್ದಾರೆ. ಆದರೆ ಗರ್ಭನಿರೋಧಕವಾಗಿ ಬಳಸಲು ಅಲ್ಲ. ಬದಲಿಗೆ ಅದನ್ನು ಮಾದಕತೆಯಾಗಿ ಬಳಸುತ್ತಿದ್ದಾರೆ.

ಈ ವಿಲಕ್ಷಣ ಪ್ರವೃತ್ತಿಯು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅವುಗಳಲ್ಲಿ ಹಲವಾರು ವಿದ್ಯಾರ್ಥಿಗಳ ಆರೋಗ್ಯದ ಮೇಲಿನ ಪರಿಣಾಮದ ಬಗ್ಗೆ ಆಂತಕ ಮೂಡಿಸುತ್ತಿದೆ.

ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಮೆಡಿಕಲ್ ಶಾಪ್ ವ್ಯಾಪಾರಿ, ಪ್ರತಿನಿತ್ಯ ಮಾರಾಟವಾಗುವ ಕಾಂಡೋಮ್ ಪ್ಯಾಕೆಟ್ಗಳ ಸಂಖ್ಯೆ ಇದೀಗ ಹಲವು ಪಟ್ಟು ಹೆಚ್ಚಾಗಿದೆ. ದುರ್ಗಾಪುರದ ಹಲವಾರು ಭಾಗಗಳಾದ ದುರ್ಗಾಪುರ ಸಿಟಿ ಸೆಂಟರ್, ಬಿಧಾನನಗರ, ಬೆನಚಿಟಿ ಮತ್ತು ಮುಚಿಪಾರದಲ್ಲಿ ಸುವಾಸನೆಯ ಕಾಂಡೋಮ್ಗಳ ಮಾರಾಟವು ಬಹಳ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಕಾಂಡೋಮ್ ಮಾರಾಟ ಮತ್ತು ಖರೀದಿ ಹೆಚ್ಚಾಗಿರುವುದರ ಹಿಂದಿನ ಕಾರಣವೇನು ಎಂದು ಪ್ರಶ್ನಿಸಿದಾಗ, ಅಂಗಡಿಯವರು ಕಾಂಡೋಮ್ ಅನ್ನು ಹೆಚ್ಚಾಗಿ ಖರೀದಿಸುತ್ತಿರುವವರು ಯುವಕರು ಎಂದು ಪ್ರತಿಕ್ರಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ