ಸಮಾವೇಶ ಅಂತ್ಯ: ಜೆಡಿಎಸ್‌ನ್ನು ಮತ್ತೆ ಸಂಘಟಿಸಲಿದ್ದೇವೆ ಎಂದ ಗೌಡರು

ಸೋಮವಾರ, 2 ಮಾರ್ಚ್ 2015 (18:40 IST)
ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಸದಸ್ಯತ್ವ ನೊಂದಣಿ ಕಾರ್ಯಕ್ರಮವು ಪ್ರಸ್ತುತ ಮುಕ್ತಾಯಗೊಂಡಿದ್ದು, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಮುಖಂಡರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಣ್ಣಪುಟ್ಟ ಸಮಸ್ಯೆಗಳಿದ್ದಲ್ಲಿ ಬಗೆಹರಿಸಿಕೊಳ್ಳಲಿದ್ದೇವೆ ಎಂದು ಮತ್ತೊಮ್ಮೆ ಉದ್ಗರಿಸಿದ್ದಾರೆ. 
 
ಸಮಾರಂಭದ ಮುಕ್ತಾಯ ಹಂತದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಸದಸ್ಯರಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರಬಹುದು. ಆದರೆ ಪಕ್ಷದಿಂದ ಹೊರ ಹೋಗುವಂತಹ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಂಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಕಟ್ಟಲಿದ್ದೇವೆ. ಮುಂದೆ ನಮ್ಮದೇ ಸರ್ಕಾರ ರಚನೆಯಾಗಲಿದೆ. ಅಲ್ಲದೆ ಪಕ್ಷವನ್ನು ನೊಂದಣಿ ಮಾಡಿಸುವ ಮೂಲಕ ಯುವಕರಿಗೆ ಪಕ್ಷದಲ್ಲಿ ಆದ್ಯತೆ ನೀಡಲಿದ್ದೇವೆ. ಅಷ್ಟೇ ಅಲ್ಲದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನೊಂದಣಿ ಮಾಡುವ ಮೂಲಕ ಪಕ್ಷವನ್ನು ಸಮರ್ಥವಾಗಿ ಸಂಘಟಿಸಲಿದ್ದೇವೆ ಎಂದರು. 
 
ಇನ್ನು ಇದೇ ವೇಳೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ, ಪಕ್ಷವನ್ನು ಸಮರ್ಥವಾಗಿ ಸಂಘಟಿಸಲು ಈ ನೊಂದಣಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಯುವಕರು ನಮ್ಮ ಪರವಾಗಿದ್ದಾರೆ. ಅಷ್ಟೇ ಅಲ್ಲದೆ ಯುವಕರಿಂದಲೇ ಪಕ್ಷವನ್ನು ಕಟ್ಟಿ ಬೆಳೆಸುತ್ತೇನೆ. ರಾಜ್ಯದ ಜನತೆಯ ಆಶೀರ್ವಾದ ನಮ್ಮ ಮೇಲಿದ್ದು, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲಿದ್ದೇನೆ. ನಮ್ಮ ಪಕ್ಷದಲ್ಲಿ ಒಡಕುಗಳಿಲ್ಲ ಎಂದರು. 
 
ಸಮಾರಂಭದಲ್ಲಿ ಮಧು ಬಂಗಾರಪ್ಪ, ಕೆ.ಎಸ್.ಪುಟ್ಟಣ್ಣಯ್ಯ, ವೈಎಸ್.ವಿ.ದತ್ತಾ, ಸೇರಿಂದತೆ 50ಕ್ಕೂ ಹೆಚ್ಚು ಮಂದಿ ಮುಖಂಡರು ಭಾಗವಹಿಸಿದ್ದರು. 
 
ಇನ್ನು ಈ ಬಾರಿಯೂ ಕೂಡ ಪಕ್ಷದ ಶಾಸಕ ಜಮೀರ್ ಅಹ್ಮದ್, ಎಂ.ಸಿ.ನಾಣಯ್ಯ, ರೇವಣ್ಣ, ಚೆಲುವರಾಯಸ್ವಾಮಿ, ಬಾಲಕೃಷ್ಣ ಸೇರಿದಂತೆ ಇತರರು ಇಂದಿನ ಸಮಾವೇಶದಲ್ಲಿ ಬಾಗವಹಿಸಿರಲಿಲ್ಲ. ಇದು ಪಕ್ಷದಲ್ಲಿ ಬಿಕ್ಕಟ್ಟಿರುವ ಬಗ್ಗೆ ಮತ್ತೊಮ್ಮೆ ಸುಳಿವು ನೀಡಿದೆ.

ವೆಬ್ದುನಿಯಾವನ್ನು ಓದಿ