ಕಾಂಗ್ರೆಸ್ ತುಂಬಾ ಅಪಾಯಕಾರಿ ವಿರೋಧ ಪಕ್ಷ: ಬಿಜೆಪಿ

ಮಂಗಳವಾರ, 4 ಆಗಸ್ಟ್ 2015 (14:49 IST)
ಕಾಂಗ್ರೆಸ್ ಪಕ್ಷ ತುಂಬಾ ಅಪಾಯಕಾರಿ ಪಕ್ಷ ಅಭಿವೃದ್ಧಿ ವಿರೋಧಿ ನೀತಿಗಳನ್ನು ಹೊಂದಿದೆ ಎಂದು ಬಿಜೆಪಿ ಪಕ್ಷದ ಸಂಸದೀಯ ಮಂಡಳಿ ಆರೋಪಿಸಿದೆ.
 
ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್, 25 ಮಂದಿ ಕಾಂಗ್ರೆಸ್ ಸಂಸದರನ್ನು ಅಮಾನತ್ತುಗೊಳಿಸಿದ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಇತರ ಪಕ್ಷಗಳೊಂದಿಗೆ ಪ್ರತಿಭಟನೆ ಆರಂಭಿಸಿದ್ದಾರೆ.
 
ಇದೊಂದು ಕರಾಳ ದಿನವಾಗಿದೆ ವಿಪಕ್ಷಗಳ ಮೇಲೆ ತುರ್ತುಪರಿಸ್ಥಿತಿ ಹೇರಲು ಬಿಜೆಪಿ ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.
 
ಲಲಿತ್‌ಗೇಟ್ ಮತ್ತು ವ್ಯಾಪಂ ಹಗರಣದಲ್ಲಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತಿದೆ. 
 
ಆದರೆ, ಬಿಜೆಪಿಯ ನಾಯಕರು ಯಾವುದೇ ತಪ್ಪು ಮಾಡಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ.
 

ವೆಬ್ದುನಿಯಾವನ್ನು ಓದಿ