ನಾವು 60 ವರ್ಷಗಳಲ್ಲಿ ಮಾಡಿದ ಕೆಲಸದ ಕ್ರೆಡಿಟ್ ಪುಕ್ಸಟೆಯಾಗಿ ಬಿಜೆಪಿ ಪಡೆದುಕೊಳ್ಳುತ್ತಿದೆ: ಕಾಂಗ್ರೆಸ್
ಸೋಮವಾರ, 30 ಏಪ್ರಿಲ್ 2018 (08:44 IST)
ನವದೆಹಲಿ: ನಾವು 60 ವರ್ಷಗಳಲ್ಲಿ ಮಾಡಿದ ಒಳ್ಳೆಯ ಕೆಲಸಗಳ ಕ್ರೆಡಿಟ್ ಗಳನ್ನು ಇದೀಗ ಬಿಜೆಪಿ ತಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಆರೋಪಿಸಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಜೆಪಿ ಅವಧಿಯಲ್ಲಿ ದೇಶದ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಸೌಲಭ್ಯ ಕಲ್ಪಪಿಸಲಾಗಿದೆ ಎಂದಿದ್ದರು. ಇದಕ್ಕೆ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಬಿಜೆಪಿ ವಿರುದ್ಧ ತಿರುಗೇಟು ನೀಡಿದ್ದಾರೆ.
‘ಅಮಿತ್ ಶಾ ಅವರೇ, ದೇಶದಲ್ಲಿ 6, 49, 867 ಹಳ್ಳಿಗಳಿವೆ. ಕಾಂಗ್ರೆಸ್ ಅವಧಿಯಲ್ಲಿ ಶೇ. 97 ಹಳ್ಳಿಗಳಿಗೆ ವಿದ್ಯುತ್ ಒದಗಿಸಲಾಗಿದೆ. ಯುಪಿಎ ಅವಧಿಯಲ್ಲಿ 1,07,600 ಹಳ್ಳಿಗಳಿಗೆ ವಿದ್ಯುತ್ ಒದಗಿಸಲಾಗಿದೆ. ಯುಪಿಎ ಅವಧಿಯಲ್ಲಿ ವರ್ಷಕ್ಕೆ 10,000 ಹಳ್ಳಿಗಳಿಗೆ ವಿದ್ಯುತ್ ಒದಗಿಸಲಾಗುತ್ತಿತ್ತು. ಬಿಜೆಪಿ ಅವಧಿಯಲ್ಲಿ 4,813 ಹಳ್ಳಿಗಳಿಗೆ ವಿದ್ಯುತ್ ಒದಗಿಸಲಾಗುತ್ತಿದೆ. ಇದೀಗ ಕಾಂಗ್ರೆಸ್ ಮಾಡಿದ ಕೆಲಸಗಳ ಕ್ರೆಡಿಟ್ ನ್ನು ಬಿಜೆಪಿ ಪಡೆಯುತ್ತಿದೆ’ ಎಂದು ರಣ್ ದೀಪ್ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.