Congress Gyaranti: ಕಾಂಗ್ರೆಸ್ ನ ಮತ್ತೊಂದು ಗ್ಯಾರಂಟಿ: 25 ಲಕ್ಷ ರೂ. ಆರೋಗ್ಯ ವಿಮೆ ಘೋಷಣೆ
ದೆಹಲಿ ಚುನಾವಣೆಗೆ ಕಾಂಗ್ರೆಸ್ ಈಗ ಎರಡನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆ. ಇದಕ್ಕೆ ಮೊದಲು ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕ ಮಾದರಿಯಲ್ಲಿ ಮಹಿಳೆಯರಿಗೆ ಮಾಸಿಕ 2,500 ರೂ. ನೀಡುವ ಯೋಜನೆಗೆ ಚಾಲನೆ ನೀಡಿದ್ದರು.
ಇದೀಗ ದೆಹಲಿ ಚುನಾವಣೆಗೆ ಕಾಂಗ್ರೆಸ್ ಎರಡನೇ ಗ್ಯಾರಂಟಿ ಘೋಷಣೆ ಮಾಡಿದೆ. ಎಲ್ಲಾ ನಾಗರಿಕರಿಗೆ 25 ಲಕ್ಷ ರೂ.ಗಳ ಆರೋಗ್ಯ ವಿಮೆ ನೀಡುವ ಗ್ಯಾರಂಟಿ ಘೋಷಿಸಿದೆ. ಕಾಂಗ್ರೆಸ್ ಜೀವನ್ ರಕ್ಷಾ ಹೆಸರಿನಲ್ಲಿ ಆರೋಗ್ಯ ವಿಮೆ ನೀಡುವ ಭರವಸೆ ನೀಡಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರಿಗೂ 25 ಲಕ್ಷ ರೂ.ಗಳ ಆರೋಗ್ಯ ವಿಮೆ ನೀಡಲಾಗುತ್ತದೆ. ಇದು ಕಾಂಗ್ರೆಸ್ ನ ಗ್ಯಾರಂಟಿ ಎಂದು ದೆಹಲಿ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಘೋಷಣೆ ಮಾಡಿದ್ದಾರೆ.