ಪ್ರಧಾನಮಂತ್ರಿ ಕ್ಷಮೆ ಯಾಚನೆಗೆ ಕಾಂಗ್ರೆಸ್ ಗದ್ದಲ– ಕೋಪಗೊಂಡ ನಾಯ್ಡು
ಬುಧವಾರ, 20 ಡಿಸೆಂಬರ್ 2017 (15:28 IST)
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಚೋದಿತ ಆರೋಪ ಮಾಡಿರುವುದಕ್ಕೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಸದಸ್ಯರು ರಾಜ್ಯಸಭೆಯಲ್ಲಿ ಗದ್ದಲ ಎಬ್ಬಿಸಿದ್ದಕ್ಕೆ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಕೋಪಗೊಂಡ ಘಟನೆ ನಡೆದಿದೆ.
ಗುಜರಾತ್ ನಲ್ಲಿ ಬಿಜೆಪಿ ಸೋಲಿಸಲು ಪಾಕಿಸ್ತಾನ ಜತೆ ಕಾಂಗ್ರೆಸ್ ಪಕ್ಷ ರಹಸ್ಯ ಸಭೆಯೊಂದನ್ನು ನಡೆಸಿತ್ತು, ಅದರಲ್ಲಿ ಮನಮೋಹನ್ ಸಿಂಗ್ ಭಾಗವಹಿಸಿದ್ದರು ಎಂದು ನರೇಂದ್ರ ಮೋದಿ ಚುನಾವಣೆಯ ಬಹಿರಂಗಸಭೆಯಲ್ಲಿ ಆರೋಪಿಸಿದ್ದರು.
ಸದನದೊಳಗೆ ಯಾವುದೇ ಹೇಳಿಕೆಯನ್ನು ಕೊಟ್ಟಿಲ್ಲ. ಆದ್ದರಿಂದ ಯಾರೊಬ್ಬರು ಕ್ಷಮೆ ಕೇಳಬೇಕಾಗಿಲ್ಲ. ಇದು ಸರಿಯಾದ ಕ್ರಮವಲ್ಲ ಎಂದು ಕಾಂಗ್ರೆಸ್ ಸದಸ್ಯರ ವಿರುದ್ದ ಹೇಳಿದ್ದಾರೆ.
ಲೋಕಸಭೆಯಲ್ಲೂ ಕಲಾಪ ಆರಂಭವಾಗುತ್ತಿದ್ದಂತೆಯೇ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಸದಸ್ಯರು ಬಾವಿಗಿಳಿದು ತೀವ್ರ ಗದ್ದಲ ನಡೆಸಿದರು. ನಂತರ ಪ್ರಶ್ನೋತ್ತರ ಅವಧಿಯಲ್ಲೂ ಪ್ರಧಾನಮಂತ್ರಿ ಕ್ಷಮೆಯಾಚಿಸಬೇಕು ಎಂದು ಕೋಲಾಹಲ ಎಬ್ಬಿಸಿದ್ದರು. ಎರಡು ಬಾರಿ ಲೋಕಸಭಾ ಸ್ಪೀಕರ್ ಕಲಾಪವನ್ನು ಮುಂದೂಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.