ರಾಹುಲ್-ಲಾಲು ವೇದಿಕೆ ಹಂಚಿಕೊಳ್ಳುವುದಿಲ್ಲ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್

ಬುಧವಾರ, 2 ಸೆಪ್ಟಂಬರ್ 2015 (18:54 IST)
ಬಿಹಾರ್ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ರಾಹುಲ್ ಗಾಂಧಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎನ್ನುವ ಉಹಾಪೋಹ ವರದಿಗಳನ್ನು ಕಾಂಗ್ರೆಸ್ ತಳ್ಳಿಹಾಕಿದೆ.
 
ಮೈತ್ರಿಯ ಅರ್ಥವೆಂದರೆ ಒಗ್ಗಟ್ಟಿನಿಂದ ಹೋರಾಡು ಎಂದು, ಇದೊಂದು ಬೃಹತ್ ಮೈತ್ರಿಕೂಟ. ಇಂತಹ ಸಂಶಯಗಳನ್ನು ವ್ಯಕ್ತಪಡಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಅಭಿಷೇಕ್ ಸಿಂಘ್ವಿ ಹೇಳಿದ್ದಾರೆ. 
 
ನಾವೆಲ್ಲರು ಒಗ್ಗಟ್ಟಿನಿಂದಿದ್ದೇವೆ. ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರೇ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ವೇದಿಕೆ ಹಂಚಿಕೊಂಡ ನಂತರ, ಉಪಾಧ್ಯಕ್ಷ ರಾಹುಲ್ ಗಾಂಧಿ ವೇದಿಕೆ ಹಂಚಿಕೊಳ್ಳದಿರುವ ಪ್ರಶ್ನೆಯೇ ಉದ್ಭವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 
ಮೇವು ಹಗರಣದಲ್ಲಿ ಅಪರಾಧಿಯಾಗಿ ಜೈಲು ಶಿಕ್ಷೆಗೊಳಗಾಗಿ ಲೋಕಸಭೆ ಸದಸ್ಯತ್ವವನ್ನು ಕಳೆದುಕೊಂಡ ಲಾಲು ಪ್ರಸಾದ್ ಬಗ್ಗೆ ರಾಹುಲ್ ಗಾಂಧಿ ಹೆಚ್ಚಿನ ಒಲವು ಹೊಂದಿಲ್ಲ ಎನ್ನುವುದು ವಿಪಕ್ಷಗಳ ಆರೋಪವಾಗಿದೆ.  
 
ಮಂಡಲ್, ಮಂದಿರ ವಿಷಯಗಳಿಗೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಬಿಹಾರ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ವಿಫಲವಾದ ಕಾಂಗ್ರೆಸ್, ಇದೀಗ ಜೆಡಿಯು ಮತ್ತು ಆರ್‌ಜೆಡಿ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ನಿತೀಶ್ ಕುಮಾರ್‌ರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿವೆ. 

ವೆಬ್ದುನಿಯಾವನ್ನು ಓದಿ