ಕಾಂಗ್ರೆಸ್ ಗೆ ಗಾಂಧಿ ಕುಟುಂಬದ ಹೊರತು ಪರ್ಯಾಯವೇ ಇಲ್ಲ- ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್
ಶುಕ್ರವಾರ, 25 ಜನವರಿ 2019 (11:49 IST)
ನವದೆಹಲಿ : ಪ್ರಿಯಾಂಕ ಗಾಂಧಿ ಕಾಂಗ್ರೆಸ್ ನ ಪ್ರಧಾನಿ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ನ ಹಿರಿಯ ನಾಯಕ, ಸಂಸದ ಶಶಿ ತರೂರ್, ಕಾಂಗ್ರೆಸ್ ಗೆ ಗಾಂಧಿ ಕುಟುಂಬದ ಹೊರತು ಪರ್ಯಾಯವೇ ಇಲ್ಲ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು, ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಉತ್ತರ ಪ್ರದೇಶದ ಪೂರ್ವ ವಲಯದ ಉಸ್ತುವಾರಿಯನ್ನು ನೀಡಲಾಗಿದೆ.
ಈ ಕುರಿತು ಹಲವು ರಾಜಕೀಯ ನಾಯಕರು ಬೆಂಬಲಿಸಿದರೆ, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್, ಕಾಂಗ್ರೆಸ್ ಗೆ ಗಾಂಧಿ ಕುಟುಂಬದ ಹೊರತು ಬೇರೆ ದಿಕ್ಕಿಲ್ಲ ಎಂದು ಹೇಳುವುದರ ಮೂಲಕ ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.