ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ವಿರುದ್ಧ ಕಾಂಗ್ರೆಸ್‌ನ ದೀಪಾ ಮುನ್ಶಿ ಕಣಕ್ಕೆ

ಶನಿವಾರ, 19 ಮಾರ್ಚ್ 2016 (12:50 IST)
ಪಶ್ಚಿಮ ಬಂಗಾಳದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್, ಮಾಜಿ ಕೇಂದ್ರ ಸಚಿವೆ ದೀಪಾ ಮುನ್ಶಿಯವರನ್ನು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪೋರೆ ಕ್ಷೇತ್ರದಿಂದ ಕಣಕ್ಕಿಳಿಸಿದೆ.
  
ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಇಂದು 42 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಅದರಲ್ಲಿ ದಾಸ್‌ಮುನ್ಶಿ ಸ್ಥಾನ ಪಡೆದಿದ್ದಾರೆ.

ಇದರೊಂದಿಗೆ ಕಾಂಗ್ರೆಸ್ ಒಟ್ಟು 95 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದಂತಾಗಿದೆ.
 
ಪ,ಬಂಗಾಳದ 294 ಕ್ಷೇತ್ರಗಳಲ್ಲಿ 100 ಸ್ಥಾನಗಳಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, ಉಳಿದ ಕ್ಷೇತ್ರಗಳನ್ನು ಸಿಪಿಐ-ಎಂ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ ಎಂದು ಎಐಸಿಸಿ ಮುಖಂಡರು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಂಕರ್ ಸಿಂಗ್ ಉತ್ತರ ಪಶ್ಚಿಮದ ರಾಣಾಘಾಟ್‌ನಿಂದ ಸ್ಪರ್ಧಿಸಿದ್ದರೆ, ಬಿದಾನಗರ್‌ದಿಂದ ಅರುನವ್ ಘೋಷ್ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ತನ್ನ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡಿದೆ.
 

ವೆಬ್ದುನಿಯಾವನ್ನು ಓದಿ