ತೆಲಂಗಾಣದಲ್ಲೂ ಕಾಂಗ್ರೆಸ್ ಗ್ಯಾರಂಟಿ ಘೋಷಣೆ

ಸೋಮವಾರ, 18 ಸೆಪ್ಟಂಬರ್ 2023 (08:18 IST)
ಹೈದರಾಬಾದ್ : ತೆಲಂಗಾಣದಲ್ಲಿ ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಅಂತ ಶಪಥ ತೊಟ್ಟಿರುವ ಕಾಂಗ್ರೆಸ್, ಕರ್ನಾಟಕ ಮಾದರಿ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.

ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ನೋಡುವುದು ನನ್ನ ಕನಸು ಎಂದಿರುವ ಸೋನಿಯಾ ಗಾಂಧಿ, 6 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಮಹಾಲಕ್ಷ್ಮಿ ಹೆಸರಿನಲ್ಲಿ ಮಹಿಳೆಯರಿಗೆ 2,500 ಹಾಗೂ 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಮಹಿಳೆಯರಿಗೆ ಫ್ರೀ ಬಸ್, ಕ್ವಿಂಟಾಲ್ ಭತಕ್ಕೆ 500 ಬೋನಸ್, 200 ಯೂನಿಟ್ ಫ್ರೀ ಕರೆಂಟ್, ಮನೆ ಇಲ್ಲದವರಿಗೆ ಇಂದಿರಮ್ಮ ಗೃಹ ಯೋಜನೆ ಸೇರಿದಂತೆ ಹಲವು ಭರವಸೆ ನೀಡಿದ್ದಾರೆ. 

ತುಕ್ಕುಗೂಡದ ‘ವಿಜಯಭೇರಿ’ ಸಾರ್ವಜನಿಕ ಸಭೆಯಲ್ಲಿ ಭಾನುವಾರ ತೆಲಂಗಾಣಕ್ಕೆ ಆರು ಗ್ಯಾರಂಟಿಗಳನ್ನು ಸೋನಿಯಾ ಗಾಂಧಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ತಕ್ಷಣ ಯೋಜನೆಗಳು ಜಾರಿಯಾಗಲಿವೆ ಎಂದು ಭರವಸೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ