ಚಂಡೀಗಢ : ಪಂಜಾಬ್‍ನಲ್ಲಿ ಪ್ರಾಮಾಣಿಕವಾದಂತಹ ಸರ್ಕಾರವನ್ನು ರಚಿಸಲು ಮತ್ತು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ತಮ್ಮ ಪಕ್ಷಕ್ಕೆ ಮತ ನೀಡುವಂತೆ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಫೆಬ್ರವರಿ 20ರಂದು ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾಗಿದ್ದು, ಎಎಪಿಯ ಪ್ರತಿಸ್ಪರ್ಧಿಗಳು ಕಾಂಗ್ರೆಸ್ ಅನ್ನು ಸೋಲಿಸಲು ಕೈಜೋಡಿಸಿದ್ದಾರೆ. ಆದರೆ ಪಂಜಾಬ್ನ ಜನರು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಮನಸ್ಸು ಮಾಡಬೇಕೆಂದು ಕೇಳಿಕೊಂಡಿದ್ದಾರೆ.
ಕಳೆದ 70 ವರ್ಷಗಳಿಂದ ಕಾಂಗ್ರೆಸ್ಸಿಗರು ಪಂಜಾಬ್ ಅನ್ನು ಲೂಟಿ ಮಾಡುತ್ತಿದ್ದಾರೆ ಮತ್ತು ಅದನ್ನು ಮುಂದುವರೆಸುತ್ತಾ ಬರುತ್ತಿದ್ದಾರೆ.
ಪಂಜಾಬ್ನಲ್ಲಿ ಎಎಪಿ ಸರ್ಕಾರ ರಚಿಸಿದರೆ, ಅದನ್ನು ಶಾಶ್ವತವಾಗಿ ತಡೆಯಲಾಗುತ್ತದೆ ಎಂಬ ಭಯದಿಂದಾಗಿ ಎಎಪಿಯನ್ನು ತಡೆಯಲು ಒಗ್ಗೂಡಿದ್ದಾರೆ ಎಂದು ಆರೋಪಿಸಿದ್ದಾರೆ.