ಗುಜರಾತ್ ಎಲೆಕ್ಷನ್ ಮೇಲೆ ಕಣ್ಣಿಟ್ಟ ಕಾಂಗ್ರೆಸ್

ಶನಿವಾರ, 16 ಏಪ್ರಿಲ್ 2022 (15:15 IST)
ನವದೆಹಲಿ : ಐದು ರಾಜ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಮುಂಬರುವ ವಿಧಾನಸಭೆ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲು ಪ್ರಯತ್ನ ಆರಂಭಿಸಿದೆ.
 
ಗುಜರಾತ್ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಹೈಕಮಾಂಡ್ ತನ್ನ ಉನ್ನತ ನಾಯಕರ ಸಭೆ ನಡೆಸಿದೆ.

ನವದೆಹಲಿ 10 ಜನಪಥ್ನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಿತು.

ಸಭೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಎ.ಕೆ ಆ್ಯಂಟನಿ, ಅಜಯ್ ಮಾಕನ್, ದಿಗ್ವಿಜಯ ಸಿಂಗ್ ಮತ್ತು ಅಂಬಿಕಾ ಸೋನಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗಿಯಾಗಿದ್ದರು.

ಈ ಸಭೆಯ ವೇಳೆ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ ಕೂಡಾ ಸೋನಿಯಾಗಾಂಧಿ ನಿವಾಸದಲ್ಲಿ ಉಪಸ್ಥಿತರಿದ್ದರು. ಅವರು ಈ ಮಹತ್ವದ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ