ತ್ರಿಪುರ ಉಪಚುನಾವಣೆ ವೇಳೆ ಕಾಂಗ್ರೆಸ್‌ ಅಧ್ಯಕ್ಷರ ಮೇಲೆ ಹಲ್ಲೆ

ಭಾನುವಾರ, 26 ಜೂನ್ 2022 (17:35 IST)

ತ್ರಿಪುರಾದ ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ವೇಳೆ ಅಗರ್ತಲದಲ್ಲಿರುವ ಕಾಂಗ್ರೆಸ್‌ ಪಕ್ಷದ ಮುಖ್ಯ ಕಚೇರಿಯಲ್ಲಿ ರಾಜ್ಯಧ್ಯಕ್ಷ ಬಿರಾಜಿತ್ ಸಿನ್ಹಾ ಅಪರಿಚಿತರ ಗುಂಪೊಂದು ಹಲ್ಲೆ ಮಾಡಿದೆ.

ಹಲ್ಲೆಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಪಚುನಾವಣೆಯಲ್ಲಿ ನಮ್ಮ ಗೆಲುವನ್ನ ಸಹಿಸಲಾಗದೆ ಬಿಜೆಪಿ ಗೂಂಡಾಗಳು ಈ ರೀತಿಯ ದಾಳಿ ಮಾಡಿರುವುದು ಖಂಡನೀಯ.

ಪೊಲೀಸರು ಮೂಕ ಪ್ರೇಕ್ಷಕರಂತೆ ವರ್ತಿಸಿರುವುದನ್ನು ಬಿಟ್ಟು ಆರೋಪಿಗಳನ್ನು ಬಂಧಿಸಿ ಎಂದು ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.

ಇದೇ ವೇಳೆ ತ್ರಿಪುರಾದ ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 3ರಲ್ಲಿ ಗೆದ್ದು ಕಾಂಗ್ರೆಸ್ 1ರಲ್ಲಿ ಜಯಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ