ಪ್ರಧಾನಿ ಮೋದಿಗೆ ಸವಾಲೆಸೆದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್

ಬುಧವಾರ, 6 ಮಾರ್ಚ್ 2019 (15:34 IST)
ನವದೆಹಲಿ : ನಿಮಗೆ ಧೈರ್ಯವಿದ್ದರೆ ನನ್ನ ವಿರುದ್ಧ ಕೇಸ್ ದಾಖಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಚಾಲೆಂಜ್ ಮಾಡಿದ್ದಾರೆ.


ದಿಗ್ವಿಜಯ ಸಿಂಗ್ ಅವರು ಮಂಗಳವಾರ ಏರ್ ಸ್ಟ್ರೈಕ್ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಪುಲ್ವಾಮಾ ದಾಳಿ ಒಂದು ಘಟನೆ ಆಕ್ಸಿಡೆಂಟ್ ಮಾತ್ರ ಎಂದು ಶಂಕೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಬಿಜೆಪಿ ನಾಯಕರು ಅವರ ವಿರುದ್ಧ ಕಿಡಿಕಾರಿದ್ದರು.


ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮತ್ತೆ ಟ್ವೀಟ್ ಮಾಡಿದ ಸಿಂಗ್, ನೀವು ಹಾಗೂ ನಿಮ್ಮ ಸಚಿವರು ನನ್ನನ್ನು ಪಾಕಿಸ್ತಾನಕ್ಕೆ ಬೆಂಬಲಿಸುವವ ಹಾಗೂ ದೇಶದ್ರೋಹಿ ಎಂದು ಹೇಳಿದ್ದೀರಿ. ನಾನು ಆ ಟ್ವೀಟನ್ನು ದೆಹಲಿಯಿಂದಲೇ ಮಾಡಿದ್ದೆ. ಹೀಗಾಗಿ ದೆಹಲಿಯಲ್ಲಿರುವ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರಲ್ಲವೇ..? ಹೀಗಾಗಿ ನಿಮಗೆ ಧೈರ್ಯವಿದ್ದರೆ ನನ್ನ ವಿರುದ್ಧ ಕೇಸ್ ದಾಖಲಿಸಿ ಎಂದು ಚಾಲೆಂಜ್ ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ