ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಫೋನ್ ಹ್ಯಾಕ್ ಆಗಿದೆ; ಕಾಂಗ್ರೆಸ್ ಆರೋಪ
ಸೋಮವಾರ, 4 ನವೆಂಬರ್ 2019 (07:22 IST)
ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಫೋನ್ ನನ್ನು ಕೂಡ ಸರ್ಕಾರ ಹ್ಯಾಕ್ ಮಾಡಿದ್ದು , ಈ ಬಗ್ಗೆ ಅವರಿಗೆ ವಾಟ್ಸಾಪ್ ಸಂದೇಶ ಬಂದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ ಅವರ ಫೋನ್ ಹ್ಯಾಕ್ ಆಗಿದ್ದು, ವಾಟ್ಸಾಪ್ ಸಂದೇಶ ಬಂದಿದೆ ಎಂಬ ಆರೋಪ ಕೇಳಿಬಂದಿತ್ತು.
ಆದರೆ ಈಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಫೋನ್ ನನ್ನು ಕೂಡ ಸರ್ಕಾರ ಹ್ಯಾಕ್ ಮಾಡಿದ್ದು, ಅವರಿಗೂ ಈ ಬಗ್ಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.