ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪಕ್ಕಾ?

ಬುಧವಾರ, 17 ಮೇ 2017 (07:09 IST)
ನವದೆಹಲಿ: ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ತಮ್ಮ ತಮ್ಮ ಬಣದ ಅಭ್ಯರ್ಥಿಯನ್ನು ಗೆಲ್ಲಿಸಲು ಆಡಳಿತ ಮತ್ತು ವಿಪಕ್ಷಗಳು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

 
ಅದರಲ್ಲೂ ಆಡಳಿತಾರೂಢ ಬಿಜೆಪಿ ಮೈತ್ರಿಕೂಟ ಒಂದೆಡೆಯಾದರೆ, ಉಳಿದೆಲ್ಲಾ ರಾಜಕೀಯ ಪಕ್ಷಗಳು ಒಂದಾಗಿ ಒಮ್ಮತದ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ. ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಅಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ.

ಅದರಂತೆ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಎರಡನೇ ಬಾರಿಗೆ ರಾಷ್ಟ್ರಪತಿಯಾಗಲಿ ಎಂದು ಆಶಿಸಿದ್ದಾರೆ. ಅದಕ್ಕೆ ಕಾಂಗ್ರೆಸ್ ಕೂಡಾ ಸಮ್ಮತಿಸಿದೆ. ಪ. ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಕೂಡಾ ಇಂದು ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಅತ್ತ ಪ್ರಣಬ್ ಮುಖರ್ಜಿ ಸರ್ಕಾರ ತನ್ನನ್ನು ಎರಡನೇ ಬಾರಿಗೆ ನಾಮನಿರ್ದೇಶನ ಮಾಡಿದರೆ ಮಾತ್ರ ಪದವಿಯಲ್ಲಿ ಮುಂದುವರಿಯುವ ಬಗ್ಗೆ ಚಿಂತಿಸುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಮತ್ತೊಮ್ಮೆ ಕಾಂಗ್ರೆಸ್ ನಾಯಕ ಪ್ರಣಬ್ ರನ್ನು ಅಭ್ಯರ್ಥಿಯಾಗಿ ವಿಪಕ್ಷಗಳು ಘೋಷಿಸುತ್ತವೋ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ