ತರೂರ್-ದಿಗ್ವಿಜಯ್‌ರಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್ ?!

ಗುರುವಾರ, 30 ಜುಲೈ 2015 (17:08 IST)
1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಯಾಕುಬ್ ಮೆಮೊನ್‌ಗೆ ಇಂದು ವಿಧಿಸಲಾದ ಗಲ್ಲು ಶಿಕ್ಷೆ ಸಂಬಂಧ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಹಾಗೂ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ನೀಡಿದ್ದ ಹೇಳಿಕೆ ವೈಯಕ್ತಿಕ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ತಮ್ಮ ಇಬ್ಬರೂ ನಾಯಕರಿಂದ ಅಂತರ ಕಾಯ್ದುಕೊಂಡಿದೆ. 
 
ಹೌದು, ರಾಜ್ಯಸಭಾ ಕಲಾಪದಲ್ಲಿ ಪಾಲ್ಗೊಂಡು ಹೊರ ಬಂದ ಬಳಿಕ ಕಾಂಗ್ರೆಸ್‌ನ ಮೇಲ್ಮನೆ ನಾಯಕ ಆನಂದ್ ಶರ್ಮಾ ಅವರನ್ನು ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದವು. ಈ ವೇಳೆ ಶರ್ಮಾ ಈ ರೀತಿಯಾಗಿ ಉತ್ತರಿಸಿದ್ದಾರೆ. 
 
ಉಗ್ರ ಯಾಕುಬ್ ಮೆಮೊನ್‌ಗೆ ಗಲ್ಲು ಶಿಕ್ಷೆ ವಿಧಿಸುವಲ್ಲಿ ಕೇಂದ್ರ ಸರ್ಕಾರ ತನ್ನ ಎಲ್ಲಾ ಸಿದ್ಧತೆಗಳನ್ನು ಪೂರೈಸಿ ಮಹಾರಾಷ್ಟ್ರ ಸರ್ಕಾರಕ್ಕೆ ನಿನ್ನೆ ಹಸಿರು ನಿಶಾನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6.30ರ ವೇಳೆಯಲ್ಲಿ ಯಾಕುಬ್‌ನನ್ನು ಗಲ್ಲಿಗೇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪ್ರಮುಖ ನಾಯಕರಾದ ತರೂರ್ ಹಾಗೂ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯಿಸಿ ಇಂತಹ ವಿಚಾರಗಳಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶರ್ಮಾ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ