ಕಾಂಗ್ರೆಸ್‌ನ ಮತ್ತೊಂದು ವಿಕೆಟ್‌ ಬಿಜೆಪಿಯತ್ತ: 'ಕಮಲ' ಕೈ ಹಿಡಿದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್

Sampriya

ಮಂಗಳವಾರ, 26 ಮಾರ್ಚ್ 2024 (18:43 IST)
ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಅವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪಂಜಾಬ್ ಬಗ್ಗೆ ಹೆಚ್ಚಿನ ಪ್ರೀತಿ ಇದೆ ಎಂದು ಶ್ಲಾಘಿಸಿದರು.

ಕಳೆದ 10 ವರ್ಷಗಳಲ್ಲಿ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಪಂಜಾಬ್ ಮೇಲೆ ಅಪಾರ ಪ್ರೀತಿ ಇರುವುದನ್ನು ನಾನು ನೋಡಿದ್ದೇನೆ. ಅವರು ಪಂಜಾಬ್‌ಗಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಬಯಸುತ್ತಾರೆ ಎಂದು ಬಿಟ್ಟು ಹೇಳಿದರು.

"ನಾನು ಪಂಜಾಬ್‌ನ ಸಮಸ್ಯೆಗಳನ್ನು ಪ್ರಸ್ತಾಪಿಸಿದಾಗಲೆಲ್ಲಾ ಪ್ರಧಾನಿ ಮತ್ತು ಗೃಹ ಸಚಿವರು ಅದನ್ನು ಯಾವಾಗಲೂ ಧನಾತ್ಮಕವಾಗಿ ತೆಗೆದುಕೊಳ್ಳುತ್ತಾರೆ ... ನಾವು ಪಂಜಾಬ್ ಅನ್ನು ಮುಂದಕ್ಕೆ ಕೊಂಡೊಯ್ಯಲು ಬಯಸುತ್ತೇವೆ ... ದೇಶವು ಪ್ರಯೋಜನ ಪಡೆಯುತ್ತಿರುವಾಗ, ಪಂಜಾಬ್ ಏಕೆ ಹಿಂದುಳಿದಿದೆ?" ಅವರು ಹೇಳಿದರು.

ರಾಜ್ಯದಲ್ಲಿ ಭಯೋತ್ಪಾದನೆಯ ಕರಾಳ ದಿನಗಳನ್ನು ಸ್ಮರಿಸಿದ ಅವರು, ಶಾಂತಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ಪಾತ್ರವನ್ನು ಶ್ಲಾಘಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ