ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲ್ಲ- ಸಿದ್ದರಾಮಯ್ಯ ಸ್ಪಷ್ಟನೆ

ಮಂಗಳವಾರ, 12 ಮಾರ್ಚ್ 2019 (06:54 IST)
ನವದೆಹಲಿ : ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ ಗೆ ಬಿಟ್ಟುಕೊಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವುದರ ಮೂಲಕ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರ ಕಾಂಗ್ರೆಸ್ ನ ಪಾಲಾಗುವುದು ಖಚಿತ ಎನ್ನಲಾಗಿದೆ.


ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಬೇಡಿ ಎಂದಿದ್ದೇನೆ. ವರಿಷ್ಠರಿಗೆ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ್ದೇನೆ. ಸ್ಕ್ರೀನಿಂಗ್ ಸಮಿತಿ ಅಜೆಂಡಾ ಗೊತ್ತಿಲ್ಲ. ರಾಜ್ಯದಿಂದ ಪಟ್ಟಿ ಬಂದಿದೆ ಆ ಪಟ್ಟಿ ಆಧರಿಸಿ ಚರ್ಚೆ ನಡೆಸಿದ್ದೇನೆ. ಹಾಲಿ ಸಂಸದರ ಕ್ಷೇತ್ರಗಳು ಹೊರತು ಪಡಿಸಿ ಚರ್ಚೆ ಮಾಡುತ್ತೇವೆಎಂದು ಹೇಳಿದ್ದಾರೆ.

 

ಜೆಡಿಎಸ್‍ಗೆ ಕಾಂಗ್ರೆಸ್ ಹಾಲಿ ಸಂಸದರ ಸೀಟು ಕೊಡಬಾರದು ಎಂದು ಆಗಿದೆ. ಹಾಗಾಗಿ ಜೆಡಿಎಸ್ ಕೇಳಿದ್ದರೂ ನಾವು ಕೊಡುತ್ತೇವೆ ಎಂದು ಹೇಳಿಲ್ಲ” ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ