Tirupati Stampede: ತಿರುಪತಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಕಾಂಗ್ರೆಸ್ ವಿರೋಧ

Krishnaveni K

ಗುರುವಾರ, 9 ಜನವರಿ 2025 (12:49 IST)
Photo Credit: X
ತಿರುಪತಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತಕ್ಕೊಳಗಾಗಿ ಸಾವನ್ನಪ್ಪಿದ್ದ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ವೈಕುಂಠ ದ್ವಾರ ದರ್ಶನ ಟಿಕೆಟ್ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ಆರು ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿತ್ತು.

ಇದರ ಬೆನ್ನಲ್ಲೇ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರ ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಆದರೆ ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಟ್ಟರೆ ಸಾಲದು. ಪ್ರತೀ ಕುಟುಂಬಕ್ಕೂ 1 ಕೋಟಿ ರೂ.ಗಳಂತೆ ಆರು ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇಂದು ತಿರುಪತಿ ಸನ್ನಿಧಾನಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ರಾಜಕೀಯ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈಗಾಗಲೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ