ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ಮೋದಿಗೆ ಬೆವರು ಇಳಿಸಲು ಕಾಂಗ್ರೆಸ್ ಲೆಕ್ಕಾಚಾರ

ಶುಕ್ರವಾರ, 15 ಡಿಸೆಂಬರ್ 2017 (11:06 IST)
ನವದೆಹಲಿ: ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದ್ದು, ಸುಗಮ ಕಲಾಪ ನಡೆಸಲು ಅನುವು ಮಾಡಿಕೊಡುವಂತೆ ವಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
 

ಆದರೆ ವಿಪಕ್ಷ ಕಾಂಗ್ರೆಸ್ ಇತ್ತೀಚೆಗೆ ಗುಜರಾತ್ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕರು ಪಾಕಿಸ್ತಾನ ನಾಯಕರೊಂದಿಗೆ ಸಭೆ ನಡೆಸಿದ್ದಾರೆಂಬ ಗಂಭೀರ ಆರೋಪ ಮಾಡಿದ್ದನ್ನು ಕೆದಕಿ ಕೇಂದ್ರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರ ರೂಪಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಸಭೆಯಲ್ಲಿ ಪಾಲ್ಗೊಂಡು ಪಾಕ್ ಜತೆ ಗುಜರಾತ್ ಚುನಾವಣೆ ವಿಷಯ ಮಾತನಾಡಿದ್ದರು ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ಇದೇ ವಿಚಾರವನ್ನು ಸಂಸತ್ತಿನಲ್ಲೂ ಪ್ರಸ್ತಾಪಿಸಿ ಪ್ರಧಾನಿ ಕ್ಷಮೆ ಕೋರುವಂತೆ ಒತ್ತಾಯಿಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ