ಮುಂಬರುವ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುತ್ತಿರುವ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಘೋಷಣೆ ಮಾಡಲಿದೆ.
ರಾಜಸ್ಥಾನ ಉದಯ್ ಪುರದಲ್ಲಿ ಈ ವಾರ ನಡೆಯಲಿರುವ ಮೂರು ದಿನಗಳ ಚಿಂತನ ಸಭೆಯಲ್ಲಿ ಕಾಂಗ್ರೆಸ್ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನಿಯಮ ಜಾರಿಗೆ ತರುವ ಬಗ್ಗೆ ಗಂಭೀರ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕುಟುಂಬ ನೇತೃತ್ವದಲ್ಲಿ ಶುಕ್ರವಾರದಿಂದ ಚಿಂತನ ಸಭೆಯಲ್ಲಿ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.