ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನಿಂದಲೂ ನಿಧಿ ಸಂಗ್ರಹ
ಬುಧವಾರ, 3 ಫೆಬ್ರವರಿ 2021 (09:32 IST)
ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲು ಕಾಂಗ್ರೆಸ್ ಪಕ್ಷವೂ ನಿಧಿ ಸಂಗ್ರಹಣೆಯಲ್ಲಿ ತೊಡಗಿಸಿಕೊಂಡಿದೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ನ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐಯುಐ ರಾಮನ ಹೆಸರಿನಲ್ಲಿ 1 ರೂ. ಅಭಿಯಾನಕ್ಕೆ ಚಾಲನೆ ನೀಡಿದ್ದು, ನಿಧಿ ಸಂಗ್ರಹ ಮಾಡುತ್ತಿದೆ. ಅಭಿಯಾನ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಸಾಕಷ್ಟು ಹಣ ಸಂಗ್ರಹವಾಗಿದೆ. ಈ ಹಣವನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ.