ಕಾಂಗ್ರೆಸ್ ಗೆ ಇಂದು ನೂತನ ಅಧ್ಯಕ್ಷರ ಆಯ್ಕೆ

ಶನಿವಾರ, 10 ಆಗಸ್ಟ್ 2019 (10:15 IST)
ನವದೆಹಲಿ: ರಾಹುಲ್ ಗಾಂಧಿಯಿಂದ ತೆರವಾದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸ್ಥಾನಕ್ಕೆ ಮುಂದೆ ಯಾರು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.


ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುವ ಸಂಭವವಿದೆ.

ಮಲ್ಲಿಕಾರ್ಜುನ ಖರ್ಗೆ, ಮುಕುಲ್ ವಾಸ್ನಿಕ್ ಮತ್ತು ಕೆಲವು ಯುವ ನಾಯಕರ ಹೆಸರುಗಳು ಈ ಸ್ಥಾನಕ್ಕೆ ಕೇಳಿಬರುತ್ತಿದೆ. ಇಂದು ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ಅಹಮ್ಮದ್ ಪಟೇಲ್, ಎಕೆ ಆಂಟನಿ ಮುಂತಾದವರು ಭಾಗವಹಿಸುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ