ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

ಮಂಗಳವಾರ, 7 ಮಾರ್ಚ್ 2023 (12:32 IST)
ಶಿಲ್ಲಾಂಗ್ : ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಮಂಗಳವಾರ ಮೇಘಾಲಯದ ಮುಖ್ಯಮಂತ್ರಿಯಾಗಿ ಸತತ 2ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.
 
ಫೆಬ್ರವರಿ 27 ರಂದು ನಡೆದ ಚುನಾವಣೆಯಲ್ಲಿ ಸಂಗ್ಮಾ ನೇತೃತ್ವದ ಎನ್ಪಿಪಿ 26 ಸ್ಥಾನಗಳನ್ನು ಗೆದ್ದಿತ್ತು. ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಇತರ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಸಂಗ್ಮಾ ನೇತೃತ್ವದ ಮೇಘಾಲಯದ ಹೊಸ ಸರ್ಕಾರದಲ್ಲಿ ಅವರ ಪಕ್ಷದಿಂದ 8 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಮಿತ್ರಪಕ್ಷಗಳಿಂದ 4 ಸಚಿವ ಸ್ಥಾನಗಳಿವೆ. ಎನ್ಪಿಪಿಯ ಮಿತ್ರ ಪಕ್ಷ ಯುಡಿಪಿ ಇಬ್ಬರು ಸಚಿವರನ್ನು ಹೊಂದಿದ್ದರೆ, ಬಿಜೆಪಿ ಮತ್ತು ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ತಲಾ ಒಬ್ಬೊಬ್ಬರು ಸಚಿವರು ಇದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ