16-18 ವರ್ಷ ವಯಸ್ಸಿನವರ ನಡುವಣ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ : ಸುಪ್ರೀಂ

ಶನಿವಾರ, 19 ಆಗಸ್ಟ್ 2023 (12:28 IST)
ದೆಹಲಿ : 16 ರಿಂದ 18 ವರ್ಷ ವಯಸ್ಸಿನ ಹದಿಹರೆಯದವರು ಸಮ್ಮತಿಯಿಂದ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡಿದ್ದರೆ, ಅದನ್ನು ಅತ್ಯಾಚಾರದ ಅಪರಾಧ ಎಂದು ಹೇಳುವ ಕಾನೂನನ್ನು ಅಮಾನ್ಯಗೊಳಿಸುವ ನಿರ್ದೇಶನವನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸುವ ವೇಳೆ,
 
ಈ ಬಗ್ಗೆ ಕೇಂದ್ರ ಅಭಿಪ್ರಾಯ ಏನು? ಎಂಬುದನ್ನು ಕೂಡ ಕೇಳಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರದ ಅಭಿಪ್ರಾಯ ಕೇಳಿದ್ದು, ಸರ್ಕಾರ ಸೇರಿದಂತೆ ಕೆಲವು ಶಾಸನಬದ್ಧ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಕೀಲ ಹರ್ಷ ವಿಭೋರ್ ಸಿಂಘಾಲ್ ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸಮ್ಮತಿ ನೀಡಿದೆ. ಇದೀಗ ಈ ಬಗ್ಗೆ ಸರ್ಕಾರದ ಅಭಿಪ್ರಾಯ ಮುಖ್ಯ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ತಿಳಿಸುವಂತೆ ನೋಟಿಸ್ ನೀಡಿದೆ.

ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ, ಗೃಹ ವ್ಯವಹಾರಗಳು ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ಇತರ ಕೆಲವು ಶಾಸನಬದ್ಧ ಸಂಸ್ಥೆಗಳಿಗೆ ನೋಟಿಸ್ ನೀಡಿದೆ.

ಇನ್ನು ಈ ಅರ್ಜಿಯಲ್ಲಿ ತಿಳಿಸಿರುವಂತೆ 16 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹದಿಹರೆಯದವರ ನಡುವಿನ ಸಮ್ಮತಿಯ ಲೈಂಗಿಕತೆಯನ್ನು ಅತ್ಯಾಚಾರ ಕಾನೂನಿನಡಿಯಲ್ಲಿ ಪ್ರಶ್ನಿಸಲಾಗುತ್ತದೆ. ಆದರೆ ಅವರ ಒಪ್ಪಿಗೆ ಇದ್ದು ನಡೆದ ಲೈಂಗಿಕ ಕ್ರಿಯೆಯನ್ನು ಕಾನೂನಿನ ಮೂಲಕ ಅತ್ಯಾಚಾರ ಅಪರಾಧ ಎಂದು ಪರಿಗಣಿಸುವುದು ಸರಿಯಲ್ಲ, ಈ ಕಾನೂನನ್ನು ಶಾಸನಬದ್ಧವಾಗಿ ಅಮಾನ್ಯಗೊಳಿಸುವುದು ಸರಿ ಎಂದು ಹೇಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ