ಕಾಂಗ್ರೆಸ್‌ನಿಂದ ವಯನಾಡಿನಲ್ಲಿ 100 ಮನೆಗಳ ನಿರ್ಮಾಣ: ರಾಹುಲ್ ಗಾಂಧಿ

Sampriya

ಶುಕ್ರವಾರ, 2 ಆಗಸ್ಟ್ 2024 (20:48 IST)
ಕೇರಳ: ನಾನು ನಿನ್ನೆಯಿಂದ ಇಲ್ಲಿದ್ದೇನೆ. ಇದು ಭೀಕರ ದುರಂತ.  ದುರಂತದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡೆವು. ನಿರಾಶ್ರಿಯರ ಜತೆ ಮಾತುಕತೆ ನಡೆಸಿದ್ದು, ನಾವು ಅವರಿಗೆ 100ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿ ಶುಕ್ರವಾರ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಪುಂಚಿರಿ ಮಟ್ಟಂ ಗ್ರಾಮಕ್ಕೆ ಭೇಟಿ ನೀಡಿದರು.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಪಕ್ಷದ ನಾಯಕರಿಗೆ ಜಿಲ್ಲಾಡಳಿತ ಮತ್ತು ಅರಣ್ಯಾಧಿಕಾರಿಗಳು ಕೇರಳದ ವಯನಾಡಿನ ಮೆಪ್ಪಾಡಿಯ ಚೂರಲ್ಮಲಾದಲ್ಲಿ ಮಾಹಿತಿ ನೀಡಿದರು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಿರಾಶ್ರಿತರಿಗೆ ಈ ಪ್ರದೇಶದಲ್ಲಿ 100ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದರು.

ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ಮನೆ ಕಳೆದುಕೊಂಡ 150 ಕುಟುಂಬಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಾಗಿ ಮನೆಗಳನ್ನು ನಿರ್ಮಿಸಲಿದೆ ಎಂದು ಕೇರಳದ ಉನ್ನತ ಶಿಕ್ಷಣ ಇಲಾಖೆ ಸಚಿವ ಆರ್ ಬಿಂದು ಶುಕ್ರವಾರ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ