ರಾಹುಲ್ ಗಾಂಧಿಯನ್ನು ನೆಲಕ್ಕೆ ಕೆಡವಿದ ಪೊಲೀಸರು?
ಗುರುವಾರ, 1 ಅಕ್ಟೋಬರ್ 2020 (16:37 IST)
ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟ, ನೂಕಾಟದಲ್ಲಿ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ನೆಲಕ್ಕೆ ಬಿದ್ದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಮಾನಭಂಗಕ್ಕೆ ಒಳಗಾದ ಯುವತಿಯೊಬ್ಬಳು ಸಾವನ್ನಪ್ಪಿದ್ದು, ಸಂತ್ರಸ್ತೆ ಮನೆಗೆ ಭೇಟಿ ನೀಡಲು ರಾಹುಲ್ ಗಾಂಧಿ ತೆರಳುತ್ತಿದ್ದರು.
ಈ ನಡುವೆ ಯಮುನಾ ಎಕ್ಸಪ್ರೆಸ್ ವೇ ಹತ್ತಿರ ರಾಹುಲ್ ಗಾಂಧಿಯವರನ್ನ ಪೊಲೀಸರು ತಡೆಯುವ ಪ್ರಯತ್ನ ನಡೆಸಿದ್ದಾರೆ.
ಆಗ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ನೂಕಾಟದಲ್ಲಿ ಸಂಸದ ರಾಹುಲ್ ಗಾಂಧಿ ನೆಲಕ್ಕೆ ಬಿದ್ದ ಘಟನೆ ನಡೆದಿದೆ.
ಪೊಲೀಸರು ತಮ್ಮ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.