ಕಾರಾಗೃಹದಲ್ಲಿ ಕೊರೊನಾ ಸ್ಪೋಟ!

ಶನಿವಾರ, 22 ಜನವರಿ 2022 (15:25 IST)
ದೇಶದಲ್ಲಿ ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ.
 
ಪೊಲೀಸರು, ವೈದ್ಯರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಈ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ, ಇದೀಗ ಕೇರಳದ ತಿರುವನಂತಪುರಂನ ಪೂಜಾಪ್ಪುರ ಸೆಂಟ್ರಲ್ ಜೈಲಿನಲ್ಲಿರುವ 262 ಕೈದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 3ದಿನಗಳಲ್ಲಿ ಒಟ್ಟು 936 ಕೈದಿಗಳಿಗೆ ಆ್ಯಂಟಿಜೆನ್ ಟೆಸ್ಟ್ ಮಾಡಲಾಗಿತ್ತು. ಅದರಲ್ಲಿ 262 ಜನರಿಗೆ ಕೊರೊನಾ ದೃಢಪಟ್ಟಿದೆ.  ಕೊರೊನಾ ಸೋಂಕಿತರ ಚಿಕಿತ್ಸೆ ಮತ್ತು ಆರೈಕೆಗಾಗಿ ವಿಶೇಷ ವೈದ್ಯರನ್ನು ನೇಮಕ ಮಾಡಬೇಕು ಎಂದು ಜೈಲು ಅಧೀಕ್ಷಕರು ಆಗ್ರಹ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ