ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ರೈಲ್ವೆ ಉದ್ಯೋಗಿಯೊಬ್ಬರು ತನ್ನ ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಪತ್ರಕರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನಾಚಕ್ ಪ್ರದೇಶದ ಓಂ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ವ್ಯಕ್ತಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ, ವರದಿಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರಿಂದ ಭಯಗೊಂಡ ವ್ಯಕ್ತಿ ಪತ್ನಿಯ ಕತ್ತು ಹಿಸುಕಿ ಕೊಂದಿದ್ದಾನೆ, ಬಳಿಕ ತಾನು ಮನೆಯ ಟೆರೆಸ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈ ಬಗ್ಗೆ ಪತ್ರಕರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.