2ನೇ ಎಲಿಜಬೆತ್‌ಗೆ ಕೊರೊನಾ ಸೋಂಕು

ಸೋಮವಾರ, 21 ಫೆಬ್ರವರಿ 2022 (13:35 IST)
ಲಂಡನ್ : ಬ್ರಿಟನ್ ರಾಣಿ ಎರಡನೇ ಎಲಿಜಬೆತ್ (95) ಅವರಿಗೆ ಕೋವಿಡ್-19 ದೃಢಪಟ್ಟಿದೆ.

ಅವರಲ್ಲಿ ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳು ಕಂಡುಬಂದಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಣಿಯ ಉತ್ತರಾಧಿಕಾರಿ ಪ್ರಿನ್ಸ್ ಚಾರ್ಲ್ಸ್ (73) ಅವರು ಫೆ.10 ರಂದು ಲಂಡನ್ನ ಪಶ್ಚಿಮದ ವಿಂಡ್ಸರ್ ಕ್ಯಾಸಲ್ನಲ್ಲಿ ತನ್ನ ತಾಯಿಯನ್ನು ಭೇಟಿಯಾದ ಎರಡು ದಿನಗಳ ನಂತರ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ರಾಣಿ ಎರಡನೇ ಎಲಿಜಬೆತ್ ಅವರು ಕೋವಿಡ್ ಲಸಿಕೆಯ ಎರಡು ಡೋಸ್ ಹಾಗೂ ಬೂಸ್ಟರ್ ಡೋಸ್ ಕೂಡ ಪಡೆದುಕೊಂಡಿದ್ದಾರೆ. ರಾಣಿ ಅವರಿಗೆ ಸೌಮ್ಯವಾದ ಶೀತ ರೋಗಲಕ್ಷಣ ಕಂಡುಬಂದಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಂಕಿಂಗ್ಹ್ಯಾಮ್ ಅರಮನೆಯು ತಿಳಿಸಿದೆ.

ಅವರಿಗೆ ವೈದ್ಯಕೀಯ ಚಿಕಿತ್ಸೆ ಮುಂದುವರಿದಿದೆ. ಕೋವಿಡ್ಗೆ ಸಂಬಂಧಿಸಿದ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ