ಭಾರತಕ್ಕೂ ಕಾಲಿಟ್ಟ ಕೊರೊನಾ ವೈರಸ್; ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಕಿಡಿ

ಬುಧವಾರ, 4 ಮಾರ್ಚ್ 2020 (09:48 IST)
ನವದೆಹಲಿ : ಚೀನಾದಲ್ಲಿ ಸಾವಿರಾರು ಜನರನ್ನು ಬಲಿ ಪಡೆದ ಮಹಾಮಾರಿ ಕೊರೊನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ ಎನ್ನಲಾಗಿದೆ. ಈ ವಿಚಾರವಾಗಿ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.


ದೆಹಲಿ ಸೇರಿದಂತೆ ಕೇರಳ, ಹೈದರಾಬಾದ್ ನಲ್ಲಿಯೂ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ. ಈ ನಡುವೆ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳಿಗೆ ಗುಡ್ ಬೈ ಹೇಳುತ್ತಿರುವ ಬಗ್ಗೆ ತಿಳಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರಾಹುಲ್ ಗಾಂಧಿ ಪ್ರಧಾನಿ ಮೊದಿ ವಿರುದ್ಧ ಕಿಡಿಕಾರಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಭಾರತದಲ್ಲೂ ಕೊರೊನಾ ವೈರಸ್ ಪತ್ತೆಯಾಗಿರುವ ಪರಿಣಾಮ ಜನರು ಆತಂಕಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸೋಶಿಯಲ್ ಮೀಡಿಯಾದಿಂದ ಹೊರಬರುತ್ತೇನೆ ಎಂದು ತಮಾಷೆ ಮಾಡುತ್ತಾ ಕೂರುವ ಬದಲು ಕೊರೊನಾ ವೈರಸ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಗಮನಹರಿಸಿ ಎಂದು ಸಲಹೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ