ಭ್ರಷ್ಟಾಚಾರ ಆರೋಪ : ಲಾಲು ಪತ್ನಿ, ರಾಬ್ರಿ ದೇವಿ ನಿವಾಸದ ಮೇಲೆ ಸಿಬಿಐ ದಾಳಿ

ಸೋಮವಾರ, 6 ಮಾರ್ಚ್ 2023 (13:27 IST)
ಪಾಟ್ನಾ : ‘ಉದ್ಯೋಗಕ್ಕಾಗಿ ಜಮೀನು’ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಸಿಬಿಐ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ.
 
ಸೋಮವಾರ ಪಾಟ್ನಾದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಆಪ್ ನಾಯಕ ಮನೀಶ್ ಸಿಸೋಡಿಯಾ ಬಂಧನದ ಬಳಿಕ ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಆರೋಪದ ಕುರಿತು ಪ್ರತಿಪಕ್ಷಗಳ ಉನ್ನತ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದು ಒಂದು ದಿನದ ನಂತರ ಸಿಬಿಐ ತಂಡವು ರಾಬ್ರಿದೇವಿ ನಿವಾಸದ ಮೇಲೆ ದಾಳಿ ನಡೆಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ