ಪಾಕ್ ನಲ್ಲಿ ಮತ ಎಣಿಕೆ ಶುರು..!
ಪಾಕಿಸ್ತಾನ : ಪಾಕಿಸ್ತಾನದಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯ ಮತಎಣಿಕೆ ಶುಕ್ರವಾರ ಪ್ರಾರಂಭವಾಗಿದೆ. ಈಗಾಗಲೇ 12 ಸ್ಥಾನಗಳ ಫಲಿತಾಂಶವೂ ಸಹ ಹೊರ ಬಿದ್ದಿದ್ದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿತ ಪಕ್ಷಗಳು ಆರಂಭಿಕ ಮುನ್ನಡೆ ಸಾಧಿಸಿದೆ. ಅಂತರ್ಜಾಲ ಸೇವೆ ಸ್ಥಗಿತಗೊಂಡಿರುವ ಕಾರಣದಿಂದ ಫಲಿತಾಂಶ ಘೋಷಣೆ ವಿಳಂಬವಾಗುತ್ತಿರುವುದು ಎಲ್ಲರ ಹುಬ್ಬೇರಿಸಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ಜಫರ್ ಇಕ್ಬಾಲ್ ಸಾಧ್ಯವಾದಷ್ಟೂ ಬೇಗ ಫಲಿತಾಂಶಗಳನ್ನು ಪ್ರಕಟಿಸುವುದಾಗಿ ಘೋಷಿಸಿಸುವುದಾಗಿ ಹೇಳಿದ್ದಾರೆ. ನಿನ್ನೆ ನಡೆದ ಚುನಾವಣೆಯಲ್ಲಿ 12 ಕೋಟಿ ಗೂ ಹೆಚ್ಚು ಮಂದಿ ಮತ ಚಲಾಯಿಸಿದ್ದರು