ನೆಂಟರ ಮನೆಗೆ ಹೋದ ದಂಪತಿ ಮೃತದೇಹ ಕೊಠಡಿಯಲ್ಲಿ ಪತ್ತೆ
ದಂಪತಿ ನಡುವೆ ಸಂಬಂಧ ಸರಿಯಿರಲಿಲ್ಲ. ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿದ್ದರು. ಇದೀಗ ನೆಂಟರೊಬ್ಬರ ಮನೆಗೆ ಉಳಕೊಳ್ಳಲು ಬಂದಿದ್ದರು. ಈ ವೇಳೆ ಮನೆಯ ಕೊಠಡಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.
ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ಗಂಡ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ತನಿಖೆ ಮುಂದುವರಿದಿದೆ.