ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೇಜ್ರಿವಾಲ್ ವಿರುದ್ಧದ ಕೇಸ್ ವಜಾಗೊಳಿಸಿದ ಕೋರ್ಟ್

ಮಂಗಳವಾರ, 31 ಮೇ 2016 (17:20 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧದ ಕ್ರಿಮಿನಲ್ ದೂರನ್ನು ವಜಾಗೊಳಿಸಿದೆ. 
 
ದೂರುದಾರ ವಕೀಲರಾದ ಪ್ರದೀಪ್ ದ್ವಿವೇದಿ, ಪ್ರಧಾನಿ ಮೋದಿ ವಿರುದ್ಧ ದ್ವೇಷ ಬೆಳೆಯುವಂತಹ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಿಸಿದ್ದರು.
 
ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಕೇಜ್ರಿವಾಲ್ ಟ್ವೀಟ್ ಮಾಡಿ, ಪ್ರಧಾನಿ ಮೋದಿಯವರ ಕುಮ್ಮಕ್ಕಿನ ಮೇರೆಗೆ ಸಿಬಿಐ ಕಾನೂನುಬಾಹಿರವಾಗಿ ಸಿಎಂ ಕಚೇರಿ ಮೇಲೆ ದಾಳಿ ನಡೆಸಿದೆ. ಪ್ರಧಾನಿಯೊಬ್ಬ ಹೇಡಿ, ಮಾನಸಿಕ ಅಸ್ವಸ್ಥ ಎಂದು ಕಿಡಿಕಾರಿದ್ದರು. 
 
ಪ್ರಧಾನಿ ಮೋದಿ ರಾಜಕೀಯವಾಗಿ ನನ್ನನ್ನು ತಡೆಯಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ತಮ್ಮ ಹೇಡಿತನ ಪ್ರದರ್ಶಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದರು.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ